ಬೆಂಗಳೂರು: ಕನ್ನಡ ಜಾನಪದ ಪರಿಷತ್ತಿನ ವತಿಯಿಂದ 2025ರ ಜನವರಿ 4ನೇ ತಾರೀಖಿನ ಶನಿವಾರರಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯ ಕಲ್ಯಾಣ ನಗರದಲ್ಲಿರುವ ಜ್ಞಾನಸೌಧ ಸಭಾಂಗಣದಲ್ಲಿ ನಡೆಯಲಿರುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ರಾಜ್ಯಮಟ್ಟದ ಪ್ರಪ್ರಥಮ ಕನ್ನಡ ಜಾನಪದ ಸಮ್ಮೇಳನದ ವಿಶೇಷವಾಗಿ ವಿನ್ಯಾಸ ಮಾಡಿರುವ ಲಾಂಛನವನ್ನು ಅನಾವರಣಗೊಳಿಸಿದರು.
ಜಯನಗರದ ಖಾಸಗಿ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡುತ್ತ, ಕನ್ನಡ ಜಾನಪದ ಪರಿಷತ್ ಅಳಿವಿನ ಅಂಚಿನಲ್ಲಿರುವ ಕಲೆಗಳನ್ನು ಉಳಿಸಿ-ಬೆಳೆಸುವಲ್ಲಿ ಮಾಡುತ್ತಿರುವ ಪ್ರಯತ್ನಗಳು ಶ್ಲಾಘನೀಯ, ಮುಂದುವರೆದ ಭಾಗವಾಗಿ ಕನ್ನಡ ಜಾನಪದ ಪರಿಷತ್ಗೋವಿಂದರಾಜನಗರದಲ್ಲಿ ಹಮ್ಮಿಕೊಂಡಿರುವ ಕನ್ನಡ ಜಾನಪದ ಸಮ್ಮೇಳನದ ಯಶಸ್ಸಿಗೆ ಶುಭ ಹಾರೈಸಿ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವಜನರು, ನಾಗರಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು.
2025ರ ಜನವರಿ 4ನೇ ತಾರೀಖಿನಂದು ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ರಾಜ್ಯ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ನಿವೃತ್ತ ಐಎಎಸ್ ಅಧಿಕಾರಿ, ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ರವರ ಸರ್ವಾಧ್ಯಕ್ಷತೆಯಲ್ಲಿ ಶಾಸಕ ಪ್ರಿಯಕಷ್ಣ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ. ಜಾನಪದ ಸಮ್ಮೇಳನದ ಯಶಸ್ಸಿಗೆ ಎಲ್ಲ ಜನಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಸಂಘ- ಸಂಸ್ಥೆಗಳು, ಸಾರ್ವಜನಿಕರು ಸಹಕಾರ ನೀಡಬೇಕು. ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ರ. ನರಸಿಂಹಮೂರ್ತಿ, ಸಂಚಾಲಕರಾದ ಅಶ್ವಥ್ ನಾರಾಯಣ, ಪ್ರತಿಕಾ ಕಾರ್ಯದರ್ಶಿ ಶಿವಶಂಕರ್, ಕಲಾವಿದ ಮನು ಕೆಂಭಾವಿ, ಸಂಘಟನಾ ಕಾರ್ಯದರ್ಶಿ ರಾಮಾಂಜನೇಯ, ಪದಾಧಿಕಾರಿಗಳಾದ ಭಾಗ್ಯ, ಅನಿತಾ, ವಿದ್ಯಾ ಹಾಜರಿದ್ದರು.