ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ಮತ್ತು ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರಗಳ ವತಿಯಿಂದ ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಹಾಗೂ ಉದಯ ಸಂಯುಕ್ತ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಿನ್ನೆಲೆ ಬೆಂಗಳೂರಿನ ವಿಜಯನಗರ ಉದಯ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಹಲವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಹಿರಿಯ ವೀಣಾ ವಾದಕಿ, ಸಿನಿಮಾ ನಿರ್ಮಾಪಕಿ, ಪತ್ರಕರ್ತರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ, ಪ್ರಸ್ತುತ ಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಜಿ. ವೈ. ಪದ್ಮ ನಾಗರಾಜುಗೆ ಕನ್ನಡ ಜಾನಪದ ಪರಿಷತ್ ವತಿಯಿಂದ ಪ್ರತಿಷ್ಠಿತ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಸ್ಕೃತರಿಗೆ ಶಾಲಿನ ಜೊತೆ ಹೂವಿನ ಹಾರ ಹಾಕಿ, ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.
ಈ ವೇಳೆ ರಮಣಶ್ರೀ ಸಮುಹ ಸಂಸ್ಥೆಗಳ ಅಧ್ಯಕ್ಷರಾದ ನಾಡೋಜ ಷಡಕ್ಷರಿ, ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ. ಜಾನಪದ ಎಸ್ ಬಾಲಾಜಿ, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷರಾದ ಪಾಲನೇತ್ರ, ಕನ್ನಡ ಜಾನಪದ ಪರಿಷತ್ತಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರ. ನರಸಿಂಹಮೂರ್ತಿ, ಮಹಾಲಕ್ಷ್ಮೀ ಬಡಾವಣೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಸತ್ಯಮೂರ್ತಿ, ಉದಯ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಗಿರೀಶ, ಭಾರತ ವಿಕಾಸ ಪರಿಷತ್ ಅಧ್ಯಕ್ಷರಾದ ರಘುನಾಥ್, ಅಂತರರಾಷ್ಟ್ರೀಯ ಗಾಯಕ ಸಂತವಾಣಿ ಸುಧಾಕರ್, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಉಮೇಶ್ ಕುಮಾರ್ ಶೆಟ್ಟಿ ಮತ್ತಿತರರು ಹಾಜರಿದ್ದರು.