ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದ ಅತ್ತಿಗುಪ್ಪೆ ವಾರ್ಡ್ ನ ಸಾಲುಮರದ ತಿಮ್ಮಕ್ಕ ಪಾರ್ಕ್ ನಾಗರೀಕರ ವೇದಿಕೆಯ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸಾಲುಮರದ ತಿಮ್ಮಕ್ಕ ಪಾರ್ಕ್ ನಾಗರಿಕರ ವೇದಿಕೆಯ ನೂತನ ಕಛೇರಿಯನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ, ಸಾಲುಮರದ ತಿಮ್ಮಕ್ಕ ಪಾರ್ಕ್ ನಾಗರಿಕರ ವೇದಿಕೆಯ ನೂತನ ಕಛೇರಿಯನ್ನು ಮಾಜಿ ಸಚಿವರು, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆ, ನೆಲ, ಜಲದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ನಿಲ್ಲಬೇಕು. ಕನ್ನಡ ನಾಡು, ನುಡಿ ಕಟ್ಟುವ ಕೆಲಸ ನಿರಂತರವಾಗಿ ಆಗಬೇಕು. ವರ್ಷದ ಎಲ್ಲ ದಿನಗಳಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಅಧ್ಯಕ್ಷ ಬಿ. ಆನಂದ್ ಕುಮಾರ್, ವಾರ್ಡ್ ಅಧ್ಯಕ್ಷ ನಾರಾಯಣ, ಸಾಲುಮರದ ತಿಮ್ಮಕ್ಕ ಪಾರ್ಕ್ ನಾಗರಿಕರ ವೇದಿಕೆಯ ಪದಾಧಿಕಾರಿಗಳು, ಹಿರಿಯ ನಾಗರಿಕರು, ಮುಖಂಡರು, ವಾಯುವಿಹಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ನಾಗರೀಕರು ಮತ್ತಿತರರು ಹಾಜರಿದ್ದರು.