ನೆಲಮಂಗಲ: ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರ ಜ್ಯೋತಿ ರಥ ಯಾತ್ರೆಗೆ ತಾಲ್ಲೂಕಿನ ಗೊಲ್ಲಹಳ್ಳಿ ಪಂಚಾಯತಿಯಲ್ಲಿ ತಾಲ್ಲೂಕು ಆಡಳಿತ ಹಾಗೂ ಕನ್ನಡ ಸಂಘ, ಸಂಸ್ಥೆ, ಸಾಹಿತ್ಯ ಪರಿಷತ್ತು ವತಿಯಿಂದ ವಿಜೃಂಭಣೆಯಿಂದ ಚಾಲನೆ ನೀಡಲಾಯಿತು.
ಗೊಲ್ಲಹಳ್ಳಿ ಗ್ರಾಪಂ ಆಡಳಿತವು ಗೊಲ್ಲಹಳ್ಳಿಯಲ್ಲಿ ಪೂಜೆ ಸಲ್ಲಿಸಿ ಸ್ವಾಗತ ಮಾಡಿದ ನಂತರ ಪ್ ಹ್ಯಾಡಾಳು, ಮೈಲನಹಳ್ಳಿ, ಬಸವನಹಳ್ಳಿಯಲ್ಲಿ ಸರಕಾರಿ ಶಾಲಾ ಮಕ್ಕಳು, ಶಿಕ್ಷಕರು ಪೂಜೆ ಸಲ್ಲಿಸಿ ಸ್ವಾಗತಿಸಿದರು.ತಾಲೂಕು ಕಚೇರಿ ಎದುರು ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪೂಜೆ ಸಲ್ಲಿಸಿ ಸ್ವಾಗತಿಸಿದರೆ, ನಗರಸಭೆ ಎದುರು ಅಧ್ಯಕ್ಷರು, ಸದಸ್ಯರು, ಪೌರಾಯುಕ್ತರು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಅಮೃತ್ ಆತ್ರೇಶ್ಮಾತನಾಡಿ, ಕರ್ನಾಟಕ ಎಂದು ನಾಮಕರಣಗೊಂಡ 50 ವರ್ಷಗಳ ಈ ಸವಿನೆನಪಿಗಾಗಿ ಕನ್ನಡ ಜ್ಯೋತಿಯ
ಮೂಲಕ ಸರಕಾರ ಜಾಗೃತಿ ಹಾಗೂ ನೆನಪು ಮಾಡಲುರಥಯಾತ್ರೆ ಆರಂಬಿಸಿದ್ದು, ರಾಜ್ಯ ಸರ್ಕಾರವು ಕನ್ನಡಭುವನೇಶ್ವರಿ ತಾಯಿಯ ಜ್ಯೋತಿ ರಥಯಾತ್ರೆಯ ಮೂಲಕಕನ್ನಡ ನಾಡಿನ ಹಿರಿಮೆಯನ್ನು ಪ್ರತಿ ಹಳ್ಳಿಗೂ ತಲುಪಿಸುವ ಮಹತ್ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ ದೊಡ್ಡಬಳ್ಳಾಪುರದಿಂದ ನೆಲಮಂಗಲಕ್ಕೆ ಪ್ರವೇಶ ಮಾಡುತ್ತಿದ್ದಂತೆ ಅದ್ಧೂರಿ ಸ್ವಾಗತ ಮಾಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಸಂಭ್ರಮ-50 ಜ್ಯೋತಿ ರಥ ಯಾತ್ರೆಗೆ ಡೊಳ್ಳು ಕುಣಿತ, ಕರಡಿ ಮಜಲು, ಗೊಂಬೆ ತಂಡ, ವಿದ್ಯಾರ್ಥಿಗಳ ಕುಣಿತ ಹಾಗೂ ಕಲಾವಿದರ ಕನ್ನಡ ಹಾಡುಗಳ ಗಾಯನ ಮೆರಗು ತಂದವು.