ಬೆಂಗಳೂರು ನಗರ ಜಿಲ್ಲೆ: ಜನಸಂಖ್ಯೆ ಸ್ಪೋಟದಿಂದ ಆಹಾರ, ವಸತಿ, ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯಗಳಲ್ಲಿ ಕೊರತೆ ಉಂಟಾಗುತ್ತಿದ್ದು, ದೇಶದ ಅಭಿವೃದ್ಧಿಗೆ ತೊಡಕುಂಟಾಗುತ್ತಿದೆ. ಆದ್ದರಿಂದ ಪ್ರತಿ ದಂಪತಿಗಳು ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರವೀಂದ್ರನಾಥ್ ಎಂ. ಮೇಟಿ ಅವರು ಸಾರ್ವಜನಿಕರಿಗೆ ತಿಳಿಸಿದರು.
ಯಲಹಂಕದಲ್ಲಿರುವ ಶೇಷಾದ್ರಿಪುರಂ ಪದವಿ ಕಾಲೇಜುನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಿಕ್ಕ ಸಂಸಾರ ಚೊಕ್ಕ ಸಂಸಾರ?, ?ಒಂದು ಬೇಕು ಎರಡು ಸಾಕು? ಎಂಬ ಘೋಶವಾಕ್ಯದೊಂದಿಗೆ ರಾಷ್ಟ್ರೀಯ ಕುಟುಂಬ ಯೋಜನೆ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕ್ಯಾಂಪ್ ಗಳನ್ನು ನಡೆಸುವ ಮೂಲಕ ಜನಸಂಖ್ಯೆ ನಿಯಂತ್ರಣ ಕುರಿತು ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ನಂತರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ.ನದೀಮ್ ಅಹ್ಮದ್ ಅವರು ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸಣ್ಣ ಕುಟುಂಬದ ಉತ್ತೇಜನ, ಜನಸಂಖ್ಯಾ ಸ್ತಿರತೆ ಬಗ್ಗೆ ಮಾತನಾಡಿದರು.ಇದೇ ಸಂದರ್ಭದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮತ್ತು ಜನಸಂಖ್ಯಾ ಸ್ಪೋಟದ ಬಗ್ಗೆ ಪ್ರಬಂಧ ಸರ್ಧೆ ಏರ್ಪಡಿಸಿ ಉತ್ತಮವಾಗಿ ಬರೆದ ನಾಲ್ಕು ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ವೈದ್ಯರು, ಅಧಿಕಾರಿಗಳು ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕರಾದ ಡಾ.ಪವನ್ ಕುಮಾರ್, ಶೇಷಾದ್ರಿಪುರಂ ಕಾಲೇಜಿನ ಪ್ರೊ . ವಿವೇಕಾನಂದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾದ ಎಂ.ರೇವಣ್ಣ, ಸ್ತ್ರೀ ರೋಗ ತಜ್ಞರಾದ ಡಾ.ಶೀಲಾ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.