ದೆಹಲಿ: ದೆಹಲಿ ಮದ್ಯನೀತಿ ಪರಿಷ್ಕರಣೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈಗಾಗಲೇ ಇ.ಡಿ. ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ಮಂಜೂರು ಮಾಡಲಾಗಿತ್ತು. ಇದೀಗ ಸಿಬಿಐ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಅವರ ಕಚೇರಿಗೆ ಪ್ರವೇಶ ಮಾಡುವಂತಿಲ್ಲ. ಸರ್ಕಾರಿ ಕಡತಗಳಿಗೆ ಸಹಿ ಹಾಕುವಂತಿಲ್ಲ. ನ್ಯಾಯಾಲಯ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು. 10 ಲಕ್ಷ ರೂ.ಗಳ ಎರಡು ಬಾಂಡ್ಗಳನ್ನು ಸಲ್ಲಿಸಬೇಕು ಎಂದು ಷರತ್ತಿನಲ್ಲಿ ತಿಳಿಸಲಾಗಿದೆ.