ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದೆ. ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಯಶಸ್ವಿ 25 ದಿನಗಳನ್ನು ಪೂರೈಸಿದ ಈ ಚಿತ್ರ 50 ದಿನಗಳತ್ತ ಹೆಜ್ಜೆ ಹಾಕುತ್ತಿದೆ. ಕಲಾವಿದರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಸಿನಿಮಾ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ “ಫಾರೆಸ್ಟ್” ಚಿತ್ರವನ್ನು ನಿರ್ಮಿಸಿದ್ದು, ಚಿತ್ರ 25 ದಿನಗಳನ್ನು ಪೂರೈಸಿರುವ ಸಂದರ್ಭದಲ್ಲಿ ಸಂತಸಗೊಂಡಿರುವ ನಿರ್ಮಾಪಕರು ಚಿತ್ರತಂಡಕ್ಕೆ ಹಾಗೂ ನಾಡಿನ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಮುಂದೆ ಕೂಡ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸುವುದಾಗಿಯೂ ಎನ್ ಎಂ ಕಾಂತರಾಜ್ ತಿಳಿಸಿದ್ದಾರೆ.
ಚಂದ್ರಮೋಹನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ಕುಮಾರ್ ಮುಂತಾದ ಹಿರಿಯ, ಕಿರಿಯ ಕಲಾವಿದರು “ಫಾರೆಸ್ಟ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.



