ಜೈಪುರ: ಇಂದು ಶುಕ್ರವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಮತ್ತು ಬಹು ವಾಹನಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಜೈಪುರ-ಅಜ್ಮೀರ್ ಹೆದ್ದಾರಿಯ ಒಂದು ಭಾಗ ನರಕಯಾತನೆಯಾಗಿ ಮಾರ್ಪಟ್ಟಿದೆ, ದುರ್ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದಾರೆ. 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ದಟ್ಟವಾದ ಕಪ್ಪು ಹೊಗೆ ಪ್ರದೇಶದಲ್ಲಿ ತುಂಬಿಕೊಂಡಿದೆ.
ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ ಪ್ರದೇಶಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ಕರೆದೊಯ್ಯಲು ಹೋಗುತ್ತಿದ್ದ ಶಾಲಾ ವ್ಯಾನ್ ಚಾಲಕನೊಬ್ಬ ಬೆಂಕಿಗೆ ಆಹುತಿಯಾದ ದೃಶ್ಯವನ್ನು ಭಯಾನಕತೆಯಿಂದ ವಿವರಿಸಿದ್ದಾರೆ. ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಕೆಲವರು ವಾಹನದಿಂದ ಹೊರಬರಲಾಗದೆ ಒಳಗೆ ಸುಟ್ಟು ಕರಕಲಾದ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ವಾಹನಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಪರಿಸ್ಥಿತಿ ತಿಳಿಯಲಿದೆ ಎಂದರು.