ಭಾರತ ಪ್ರವಾಸದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ತಂಡ ಮೊದಲ ಬಾರಿಗೆ ಗೆಲುವಿನ ರುಚಿ ಕಂಡಿತು. ಟೆಸ್ಟ್ ಹಾಗೂ ಮೂರು ಏಕದಿನ ಸರಣಿಯಲ್ಲಿ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ, ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದು ಬೀಗಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 12 ರನ್ಗಳ ಜಯ ಸಾಧಿಸಿದೆ. ಭಾರತದ ಹುಡುಗಿಯರು ಗೆಲುವಿಗಾಗಿ ಸಾಕಷ್ಟು ಪ್ರಯತ್ನಿಸಿದರು ಅವರ ವಿರುದ್ಧ ವಿಫಲವಾಗಿದೆ.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 189 ರನ್ ಕಲೆಹಾಕಿತು. ಬಳಿಕ 190 ರನ್ಗಳ ಟಾರ್ಗೆಟ್ ಬೆನ್ನತ್ತಿದ, ಟೀಂ ಇಂಡಿಯಾ 20 ಓವರ್ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 177 ರನ್ ಗಳಿಸಲಷ್ಟೇ ಶಕ್ತವಾಯಿತು. ಮೂರು ಟಿ20 ಸರಣಿಯ ಭಾಗವಾಗಿ 2ನೇ ಪಂದ್ಯ ಭಾನುವಾರ ಚೆಪಾಕ್ ಮೈದಾನದಲ್ಲಿ ನಡೆಯಲಿದೆ.