ನವದೆಹಲಿ: ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ಸೇವನೆ ತಡೆ ಘಟಕ)ದ ಕೆಂಗಣ್ಣಿಗೆ ತಾವು ಗುರಿಯಾಗಿರುವುದಾಗಿ ಕುಸ್ತಿಪಟು ಬಜರಂಗ್ ಪೂನಿಯಾ ಸೋಮವಾರ ಆರೋಪಿಸಿದ್ದಾರೆ. ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕದ ದುರಹಂಕಾರವನ್ನು ಪ್ರಶ್ನಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಸೋನೆಪತ್ನಲ್ಲಿ ಮಾರ್ಚ್ 10ರಂದು ನಡೆದ ಆಯ್ಕೆ ಟ್ರಯಲ್ಸ್ನಲ್ಲಿ ನಿಷೇಧಿತ ಉದ್ದೀಪನ ಮದ್ದು ಪರೀಕ್ಷೆಗಾಗಿ ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದಕ್ಕಾಗಿ ಪೂನಿಯಾ ಅವರನ್ನು ಏಪ್ರಿಲ್ 23ರಂದು ನಾಡಾ ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು.
ಅದನ್ನು ಸಂಯುಕ್ತ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಸಂಸ್ಥೆಯೂ ಅಂಗೀಕರಿಸಿತ್ತು. ಜೂನ್ 24ರಂದು ನಾಡಾ ಮತ್ತೊಮ್ಮೆ ಅಮಾನತುಗೊಳಿಸಿತ್ತು.‘ನಾಡಾ ನನ್ನನ್ನು ಹೇಗೆ ಗುರಿಯಾಗಿಸಿದೆ ಎಂಬುದನ್ನು ಇದು ತೋರಿಸುತ್ತದೆ. ನಾನು ಯಾವುದೇ ಕಾರಣಕ್ಕೂ ಕುಸ್ತಿಯನ್ನು ಮುಂದುವರಿಸಲು ಅವರು ಬಯಸುವುದಿಲ್ಲ’ ಎಂದು ಬಜರಂಗ್ ‘ಎಕ್ಸ್’ನಲ್ಲಿ ಪೆÇೀಸ್ಟ್ ಮಾಡಿದ್ದಾರೆ.