ನೆಲಮಂಗಲ: ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸುತ್ತಿದ್ದು ಇದನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ನಿಕಟ ಪೂರ್ವ ಶಾಸಕ ಡಾ: ಕೆ.ಶ್ರೀನಿವಾಸ್ ಮೂರ್ತಿ ತಿಳಿಸಿದರು.ಮೋಟಗೊಂಡನಹಳ್ಳಿ ಗ್ರಾಮದಲ್ಲಿ ನೂತನ ವಿವಿದೊದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು,ಸಹಕಾರಿ ಸಂಘಗಳು ಉಳ್ಳವರಿಗೆ ಸಾಲ ಕೊಡುವ ಬದಲು ಆರ್ಥಿಕವಾಗಿ ದುರ್ಬಲ ಹೊಂದಿರುವವರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡುವ ಮುಖೇನ ಅವರ ಆರ್ಥಿಕ ಸಬಲತೆಗೆ ಮುಂದಾಗಿ ಸಂಘಗಳು ಅಭಿವೃದ್ಧಿ ಹೊಂದುವ ಜತೆಗೆ ರೈತರಿಗೂ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್.ಅಶೋಕ್ ಮಾತನಾಡಿ ತಾಲ್ಲೂಕಿನಲ್ಲಿ ವಿಎಸ್ಎಸ್ಎನ್ ಸಂಘಗಳುಉತ್ತಮವಾಗಿ ಕಾರ್ಯ ನಿರ್ವಾಯಿಸುತ್ತಿದ್ದು ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ ಮೋಟಗೊಂಡನಹಳ್ಳಿ ಸಂಘವು ಉತ್ತಮವಾಗಿ ಆಡಳಿತ ನಡೆಸುತ್ತಿದ್ದು ?45 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ?18 ಲಕ್ಷ ಸಾಲ ಪಡೆದು ಉಳಿದ ಹಣವನ್ನು ಸಂಘದ ಲಾಭದ ಹಣವನ್ನು ಬಳಕೆ ಮಾಡಲಾಗಿದೆ ಎಂದರು.
ಸಹಕಾರ ಸಂಘದ ಅಧ್ಯಕ್ಷ ರೇಣುಕಪ್ಪ ಮಾತನಾಡಿ, ಪ್ರತಿ ವರ್ಷವೂ ತಾಲ್ಲೂಕಿನಲ್ಲಿ ?150 ಕೋಟಿಗೂ ಹೆಚ್ಚು ಬೆಳೆ ಸಾಲವನ್ನು ನೀಡುತ್ತಾ ಬಂದಿದ್ದು, ರೈತರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ರೈತರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಾಮ ನಿರ್ದೇಶಕ ಎಂ.ಕೆ. ಧನಂಜಯ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವರುದ್ರಪ್ಪ, ಮೋಟಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ಸಹಕಾರ ಸಂಘದ ಅಧ್ಯಕ್ಷ ರೇಣುಕಪ್ಪ, ಮಾಜಿ ತಾಲೂಕು ಪಂಚಾಯಿತಿ ಹನುಮಂತ್ ರಾಯಪ್ಪ, ಕಮಲಮ್ಮ,ಪರಮೇಶ್, ರಂಗನಾಥ್,ರಮೇಶ್, ನಿರ್ದೇಶಕರಾದ ರವಿಕುಮಾರ್, ಸುರೇಶ್ ತಾವರೆಕೆರೆ ಪೊಲೀಸ್ ಸಿಬ್ಬಂದಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.