ಹಾಸನ: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಸೋಲಿನ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರೀತಂಗೌಡ ಕಾರಣ ಎಂಬ ಆರೋಪ ಕೇಳಿಬಂದಿದೆ.ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ಡ್ರೈವ್ ಹೊರಕ್ಕೆ ಬಿದ್ದ ವಿಚಾರದ ಸಲುವಾಗಿ ಪೆನ್ಡ್ರೈವ್ ಹಂಚಿಕೆ ಆರೋಪದಲ್ಲಿ ಪ್ರೀತಂಗೌಡರದ್ದೇ ಪ್ರಮುಖ ಪಾತ್ರ ಎಂಬ ಆರೋಪಗಳನ್ನು ಹೊರಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಆರೋಪವನ್ನು ಹೈಕಮಾಂಡ್ ನಾಯಕರ ಗಮನಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎಂದಿದ್ದಾರೆ ಎನ್ನಲಾಗುತ್ತಿದೆ.ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆದಿದೆ. 14 ಕ್ಷೇತ್ರಗಳ ಪೈಕಿ 14 ರಲ್ಲೂ ಎನ್ಡಿಎ ಅಭ್ಯರ್ಥಿಗಳು ಗೆಲ್ಲುವ ವಾತಾವರಣ ಇತ್ತು. ಆ ಪೈಕಿ ಹಾಸನ ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಸೋಲುಂಡಿದ್ದಾರೆ.
ಪಕ್ಷದಲ್ಲಿದ್ದುಕೊಂಡು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಪ್ರೀತಂಗೌಡ ಎಂಬ ದೂರನ್ನು ಬಿಜೆಪಿ ವರಿಷ್ಠರಿಗೆ ನೀಡಿದ್ದಾರೆ ಎನ್ನಲಾಗಿದೆ. ಹೀಗೆ ಪೆನ್ಡ್ರೈವ್ ಪ್ರಕರಣ ಹೊರಕ್ಕೆ ತಂದಿದ್ದೇ ಪ್ರೀತಂಗೌಡ. ಆದ್ರೆ ಅವರಿಂದು ಪಕ್ಷದ ಸಂಘಟನೆಯಲ್ಲಿಪ್ರಮುಖ ಪಾತ್ರ ವಹಿಸಿದ್ದಾರೆ.ರಾಜ್ಯ ಬಿಜೆಪಿಯಲ್ಲಿ ಪ್ರಧಾನ ಕಾರ್ಯ ದರ್ಶಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ಪಕ್ಷ ವಿರೋಧಿ ಕೆಲಸ ಮಾಡಿ,ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಬಹು ದಾದಂತಹ ವಾತಾವರಣವನ್ನು ಹಾಳು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಆಗಲೇಬೇಕು ಎಂದು ಹೈಕಮಾಂಡ್ ನಾಯಕರ ಮುಂದೆ ವಾದ ಮಂಡನೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಕುಮಾರಸ್ವಾಮಿ ವಾದಕ್ಕೆ ಹೈಕಮಾಂಡ್ ನಾಯಕರು ಸಮ್ಮತಿ ಸೂಚಿಸಿದ್ದು, ಅವರ ಮೌಖಿಕ ದೂರಿನ ಆಧಾರದ ಮೇಲೆ ಬಿ.ವೈ. ವಿಜಯೇಂದ್ರರ ಬಳಿ ಪ್ರೀತಂಗೌಡರ ಬಗ್ಗೆ ಮಾತುಕತೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.