ಚಾಮರಾಜನಗರ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನ ನರಿಪುರ ಹೆಲಿಪಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿಯವರು ಬಾಣಂತಿಯ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.