ಬೆಂಗಳೂರು: ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಪೊಲೀಸರು ಎಫ್ ಐಆರ್ ದಾಖಲಿಸಿರುವ ಘಟನೆ ನಡೆದಿದೆ.ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
ಜು.6 ರಂದು ಮಧ್ಯರಾತ್ರಿ 1:30ರವರೆಗೆ ಪಬ್ ತೆರದಿತ್ತು.1ಗಂಟೆಯವರೆಗೆ ಮಾತ್ರ ಪಬ್ ತೆರವಿಗೆ ಅವಕಾಶ ನೀಡಲಾಗಿತ್ತು. ಅವಧಿಗೂ ಮೀರಿ ಪಬ್ ತೆರೆದಿದ್ದ ಬಗ್ಗೆ, ಜೋರಾಗಿ ಮ್ಯೂಸಿಕ್ ಕೇಳಿ ಬರುತ್ತಿದ್ದರಿಂದ ಗಸ್ತಿನಲ್ಲಿದ್ದ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಪಬ್ ಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿ ಅನೇಕ ಗ್ರಾಹಕರು ಪಾರ್ಟಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಅವಧಿಗೂ ಮೀರಿ ಪಬ್ ಓಪನ್ ಮಾಡಿದ್ದರಿಂದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿರಾಟ್ ಕೊಹ್ಲಿ ಅವರ ಒನ್ 8 ಕಮ್ಯೂನ್ ದೆಹಲಿ, ಮುಂಬೈ, ಪುಣೆ ಮತ್ತು ಕೋಲ್ಕತ್ತಾದಂತಹ ಇತರ ಮೆಟ್ರೋ ನಗರಗಳಲ್ಲಿ ಶಾಖೆಗಳನ್ನು ಹೊಂದಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಂಗಳೂರು ಶಾಖೆಯನ್ನು ಪ್ರಾರಂಭಿಸಲಾಗಿತ್ತು.
ಕಳೆದ ವರ್ಷ ಇದೇ ಪಬ್ ನ ಮುಂಬೈ ಶಾಖೆಯಲ್ಲಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ಪಂಚೆ ಧರಿಸಿಕೊಂಡು ಬಂದಿದ್ದಕ್ಕಾಗಿ ಪಬ್ ಯೊಳಗೆ ಪ್ರವೇಶ ನಿರಾಕರಿಸಲಾಗಿತ್ತು. ಈ ವಿಡಿಯೋ `ಎಕ್ಸ್’ ನಲ್ಲಿ ವೈರಲ್ ಆಗಿತ್ತು.