ಬೆಂಗಳೂರು: ಭಾಷಾಂತರ ನಿರ್ದೇಶನಾಲಯ ನೌಕರರ ಸಂಘದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ವಿ.ವಿ.ಟವರ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ, ಭಾಷಾಂತರ ನಿರ್ದೇಶನಾಲಯ ರಾಜ್ಯ ಸರ್ಕಾರದ ಒಂದು ಪ್ರಮುಖ ಅಂಗಗಳಲ್ಲಿ ಒಂದಾಗಿದೆ,ಭಾಷಾಂತರ ನಿರ್ದೇಶನಾಲಯದಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳ್ಳಲು ಸಹಕಾರಿಯಾಗಿದೆ ಎಂದರು.
ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನಾ ಇಲಾಖೆಯ ಕಾರ್ಯದರ್ಶಿ ಜಿ.ಶ್ರೀಧರ್, ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ, ನೌಕರರ ಸಂಘದ ಅಧ್ಯಕ್ಷ ಭಕ್ತರಾಜ್ ಪಾಟೀಲ್, ಸಂಘದ ವಿವಿಧ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.