ಬೆಂಗಳೂರು: ನಗರದ ವರ್ತುಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಇಂದು ಪ್ರಥಮ ವರ್ಷದ ವಿದ್ಯಾಥಿಗಳಿಗೆ ಸ್ವಾಗತ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂಸ್ಥೆಯ ಕಾರ್ಯದರ್ಶಿ ಡಾ.ಗಿಣಿಸ್ವಾಮಿ ರವರು ಜ್ಯೋತಿ ಬೆಳಗಿಸಿ ಮಾತನಾಡಿ, ವಿದ್ಯಾರ್ಥಿಗಳು ಎಂದಿಗೂ ಶಿಸ್ತು, ತಾಳ್ಮೆ, ವಿನಯ, ಬೆಳಸಿಕೊಳಬೇಕು.
ವಿದ್ಯಾರ್ಥಿಗಳು ಕಾಲೇಜಿನಲ್ಲಿ ಶ್ರದ್ಧೆಯಿಂದ ಓದುವ ಕಡೆ ಗಮನಹರಿಸಿ ತಮ್ಮ ಗುರಿಯನ್ನು ಉತ್ತಮ ರೀತಿಯಲ್ಲಿ ತಲುಪಬೇಕೆಂದು ಅಭಿಪ್ರಾಯಿಸಿದರು. ಕಾರ್ಯಕ್ರಮದಲ್ಲಿ ಮಾರ್ವೆಲ್ ಕಾಲೇಜಿನ ಅಧ್ಯಕ್ಷರಾದ ನಾರಾಯಣಪ್ಪ ರವರು ಮಾತನಾಡಿ ಪ್ರತಿಭೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರುತ್ತದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಮಾನಸ, ಕನ್ನಡ ಉಪನ್ಯಾಸಕರಾದ ಕಾರ್ತಿಕ್ ನಾಯಕ್, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸೌಮ್ಯ, ವಿಜ್ಞಾನ ವಿಭಾಗದ ವೇದಮೂರ್ತಿ ಹಾಗೂ ಎಲ್ಲ ವಿಭಾಗದ ಅಧ್ಯಾಪಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.