ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ವಕೀಲರೊಬ್ಬರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ದೂರು ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ವಕೀಲ ರವಿಕುಮಾರ್ ಜುಲೈ 19ರಂದೇ ಮುಡಾ ಹಗರಣ ಕುರಿತು ಪ್ರಧಾನಿ ಮೋದಿಗೆ 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಜತೆಗೆ, ಮುಡಾ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳುವಂತೆ ನಿರ್ದೇಶನ ನೀಡುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಮುಡಾ ಮಾಜಿ ಆಯುಕ್ತರಾದ ದಿನೇಶ್, ಡಿಬಿ ನಟೇಶ್ ವಿರುದ್ಧ ಆರೋಪ ಮಾಡಲಾಗಿದ್ದು, ಇಬ್ಬರು ಸೇರಿ 100 ಕೋಟಿ ರೂಪಾಯಿಗೂ ಅಧಿಕ ಆರ್ಥಿಕ ನಷ್ಟ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸೇಲ್ಡೀಡ್, ಸೆಟಲ್ಮೆಂಟ್ ಡೀಡ್ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ದಿನೇಶ್ ಕುಮಾರ್ ಮತ್ತು ನಟೇಶ್ ಬೇನಾಮಿ ವಹಿವಾಟು ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.