ಬೆಂಗಳೂರು ಗ್ರಾಮಾಂತರ ಜಿಲ್ಲೆ: 2024-25 ನೇ ಸಾಲಿನಲ್ಲಿ ಸುವಿಧಾ ಯೋಜನೆಯಡಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಅನ್ಲೈನ್ ವೇದಿಕೆಯಲ್ಲಿ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಅಳವಡಿಸಲಾಗಿದೆ.
ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೊಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ.
ಈ 13 ಯೋಜನೆಗಳಿಗೆ 2024-25 ನೇ ಸಾಲಿಗೆ ಅರ್ಹ ವಿಕಲಚೇತನರು ಆನ್ಲೈನ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾ ಸಿಂಧು (https://sevasindhu.karnataka.gov.in/Sevasindhu/Departmentservices) ಪೋರ್ಟಲ್ ನಲ್ಲಿ 2024 ರ ಅಗಸ್ಟ್ 31 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನಿಯಮಾನುಸಾರ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ:- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಛೇರಿಗೆ ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:080-29787441ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.