ಮುಂಬೈ: ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಅಂತ್ಯಕ್ಕೆ ಮಿಶ್ರ ಪ್ರತಿಕ್ರಿಯೆಯಲ್ಲಿ ವಹಿವಾಟಿನಲ್ಲಿ ಅಂತ್ಯಗೊಳಿಸಿದ್ದು, ಸೆನ್ಸೆಕ್ಸ್ ಅಲ್ಪ ಏರಿಕೆ ಕಂಡಿದ್ದರೆ, ನಿಫ್ಟಿ ಅಲ್ಪ ಪ್ರಮಾಣದ ಕುಸಿತ ಕಂಡಿದೆ.
ಕಳೆದ ವಾರಾಂತ್ಯದಲ್ಲಿ ಅಲ್ಪ ಪ್ರಮಾಣದ ಕುಸಿತ ಕಂಡಿದ್ದ ಸೆನ್ಸೆಕ್ಸ್ ಇಂದು ಕೇವಲ 9.83 ಅಂಕಗಳ ಏರಿಕೆಯೊಂದಿಗೆ 79,496.15 ಅಂಕ ತಲುಪಿತು. ಅಂತೆಯೇ ನಿಫ್ಟಿ 6.90 ಅಂಕಗಳ ಕುಸಿತದೊಂದಿಗೆ 24,141.30 ಅಂಕಗಳಿಗೆ ಕುಸಿದು ಅಲ್ಪ ಪ್ರಮಾಣದಲ್ಲಿ ಕುಸಿತ ಕಂಡಿತು.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟಾರೆ ಶೇ.0.012ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.029ರಷ್ಟು ಕುಸಿತಗೊಂಡಿದೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಮಹೀಂದ್ರಾ ಮತ್ತು ಮಹೀಂದ್ರಾ, ಜೆಎಸ್ಡಬ್ಲ್ಯೂ ಸ್ಟೀಲ್, ಎನ್ಟಿಪಿಸಿ, ಅದಾನಿ ಪೋರ್ಟ್ಸ್, ಬಜಾಜ್ ಫಿನ್ಸರ್ವ್ ಮತ್ತು ಲಾರ್ಸೆನ್ ಮತ್ತು ಟೂಬ್ರೊ ಸಂಸ್ಥೆಯ ಷೇರುಗಳ ಮೌಲ್ಯದಲ್ಲಿ ಕುಸಿತ ಕಂಡುಬಂದಿದೆ.