ಭಾರತ ಮಹಿಳಾ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ 2-1 ಅಂತರದಿಂದ ಜಯಗಳಿಸಿದೆ. ಮೂರನೇ ಮತ್ತು ನಿರ್ಣಾಯಕ ಪಂದ್ಯದಲ್ಲಿ ಭಾರತ ವನಿತಾ ಪಡೆ 60 ರನ್ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತು.
ಸ್ಮೃತಿ ಮಂಧಾನ ಅವರ 77 ರನ್ ಮತ್ತು ರಿಚಾ ಘೋಷ್ ಅವರ 54 ರನ್ಗಳ ಇನ್ನಿಂಗ್ಸ್ ಭಾರತದ ಗೆಲುವಿಗೆ ಪ್ರಮುಖ ಕಾರಣವಾಯಿತು.ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ ಇದೀಗ ಮತ್ತೆ ತನ್ನ ಗೆಲುವಿನ ಹಾದಿಗೆ ಮರಳಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ 60 ರನ್ಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದು, ಇದರೊಂದಿಗೆ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.