ದೇವನಹಳ್ಳಿ: ತಾಲೂಕಿನಲ್ಲಿ ಕೊರತೆಯಿರುವ ಅಂಗನವಾಡಿ ಕಟ್ಟಡಗಳಿಗೆ ಇನ್ಫೋಸಿಸ್ ಸಂಸ್ಥೆ ವತಿಯಿಂದ ಸಧ್ಯದಲ್ಲೆ ಕಟ್ಟಡ ನಿರ್ಮಾಣ ಕಾರ್ಯ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಪ್ರತಿ ಪಂಚಾಯತಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಹೊಂದಿರುವ ಆಟದ ಮೈದಾನ ಹೊಂದಿರುವ ಸರ್ಕಾರಿ ಶಾಲೆಗಳನ್ನು ಸಿ.ಎಸ್.ಆರ್ ಅನುದಾನದಡಿ ಪ್ರಾರಂಭಿಸಲಾಗುತ್ತದೆ,
ಅಂಗನವಾಡಿಗಳಲ್ಲಿ ಮಕ್ಕಳಿಗೆ ಉತ್ತಮ ವಾತಾವರಣ ಸೃಷ್ಟಿ ಮಾಡಬೇಕು ದೇಶದ ಮುಂದಿನ ಸತ್ಪ್ರಜೆಗಳಾಗಲು ಶಿಕ್ಷಕಿಯರು ಶ್ರಮಿಸಬೇಕು ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಅಂಗನವಾಡಿ ಶಿಕ್ಷಕಿಯರ ಮತ್ತು ಸಹಾಯಕಿಯರ ದಿನಾಚರಣೆ ಶಿಶು ಅಭಿವೃದ್ಧಿ ಯೋಜನೆಯ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಗನವಾಡಿಯ ಉತ್ತಮಶಿಕ್ಷಣ ವಾತಾವರಣವನ್ನು ಕಲ್ಪಿಸುವ ಯೋಜನೆ ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಈ ಮಹತ್ಕಾರ್ಯ ಕಾರ್ಯರೂಪಕ್ಕೆ ಬಂದಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಉಪಯೋಗಿಸಿಕೊಂಡು ಶೈಕ್ಷಣಿಕವಾಗಿ, ಆರ್ಥಿಕವಾಗಿ ಸರ್ವತೋಮುಖ ಅಭಿವೃದ್ಧಿಯನ್ನು ಹೊಂದಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಹೊನ್ನಮ್ಮಗವಿ ಸುದರ್ಮ ಸಿಂಹಾಸನ ಮಠಾಧ್ಯಕ್ಷ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿ, ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಅನಂತಕುಮಾರಿ, ಪ್ರಜಾ ವಿಮೋಚನ ಚಳುವಳಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ದಾಸರಬೀದಿ ಮುರಳಿ ಅಂಗನವಾಡಿ ಶಿಕ್ಷಕಿಯರ ಮತ್ತು ಸಹಾಯಕಿಯರ ಸಂಘದ ತಾಲ್ಲೂಕು ಅಧ್ಯಕ್ಷೆ ಪುಷ್ಪಾವತಮ್ಮ, ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಲೋಕೇಶ್, ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ವೆಂಕಟೇಶ್, ಇನ್ನು ಹಲವು ಮುಖಂಡರು ಇದ್ದರು.