ದೆಹಲಿ: ಗುರುವಾರ ರಾತ್ರಿನಿಧನರಾದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ಅವರ ಅಂತ್ಯಕ್ರಿಯೆ ಇಂದು ದೆಹಲಿಯಲ್ಲಿ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆದಿದೆ.ಇಂದು ಮಧ್ಯಾಹ್ನದ ವೇಳೆಗೆ ದೆಹಲಿಯ ನಿಗಮ್ ಬೋಧ್ ಘಾಟ್ನಲ್ಲಿ ಸಿಂಗ್ ಅವರ ಅಂತ್ಯೆ ಕ್ರಿಯೆ ನೆರವೇರಿಸಲಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜ್ನಾಥ್ಸಿಂಗ್, ಅಮಿತ್ ಶಾ, ಜೆ.ಪಿ.ನಡ್ಡಾ, ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮ ಸಲ್ಲಿಸಿದರು.
ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆಸಿಂಗ್ ಅವರ ನಿವಾಸದಿಂದ ಅವರ ಪಾರ್ಥೀವ ಶರೀರವನ್ನು ಎಐಸಿಸಿ ಕಚೇರಿಗೆ ತರಲಾಯಿತು. ಅಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಸಾರ್ವಜನಿಕರ ದರ್ಶನಕ್ಕೆ ಕೆಲ ಕಾಲ ವ್ಯವಸ್ಥೆ ಮಾಡಲಾಗಿತ್ತು. ನಂತರ ಅಲಕೃಂತ ವಾಹನದಲ್ಲಿ ಮೆರವಣಿಗೆಯಲ್ಲಿ ನಿಗಮ್ ಬೋಧ್ ಘಾಟ್ಗೆ ತರಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರದ ಮೂರು ಸೇನಾ ಪಡೆಗಳಿಂದಲೂ ಗೌರವ ಸಲ್ಲಿಸಲಾಯಿತು.