ಬೆಳಗಾವಿ: ಸುವರ್ಣ ಸೌಧದಲ್ಲಿ ಇಂದು ಶುರುವಾದ ವಿಧಾನಸಭಾ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪವನ್ನು ಸೂಚಿಸಲಾಯಿತು. ವಿಶ್ವದ ಖ್ಯಾತ ಉದ್ಯಮಿಯೆನಿಸಿಕೊಂಡಿದ್ದ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂಬೈನಲ್ಲಿ ಶಾಲಾ ಶಿಕ್ಷಣ ಪೂರೈಸಿದ ನಂತರ ಅವರು ಅಮೆರಿಕದ ವಿಶ್ವವಿದ್ಯಾಲಯವೊಂದರಿಂದ ಆರ್ಕಿಟೆಕ್ಚರ್ ನಲ್ಲಿ ಪದವಿ ಪಡೆದು ಭಾರತಕ್ಕೆ ವಾಪಸ್ಸಾಗಿ ಉದ್ಯಮದಲ್ಲಿ ತೊಡಗಿದರು, ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಕಡಿಮೆ ಬೆಲೆಯ ನ್ಯಾನೋ ಕಾರನ್ನು ಸೃಷ್ಟಿಸಿ ಕೆಳಮಧ್ಯಮ ವರ್ಗದ ಕುಟುಂಬಗಳು ಸಹ ಕಾರಲ್ಲಿ ಓಡಾಡುವ ಸನ್ನಿವೇಶ ಸೃಷ್ಟಿಸಿದರು, ಅವರ ಸಾವಿನಿಂದ ಉದ್ಯಮ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ಹೇಳಿದರು.