ದೇವನಹಳ್ಳಿ: ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯತಿಯ ಸಮಗ್ರ ಅಭಿವೃದ್ಧಿ ಯೋಜನೆಯಡಿ ಬೈಚಾಪುರ ಗ್ರಾಮದಲ್ಲಿ ಕಿರಿಯ ಪ್ರಾಥಮಿಕ ಶಾಲೆಯನ್ನು 70 ಲಕ್ಷರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪನವರು ಉದ್ಘಾಟಿಸಿದರು .
ಅಣ್ಣೇಶ್ವರ ಗ್ರಾಮ ಪಂಚಾಯತಿ ವತಿಯಿಂದ ಉತ್ತಮ ಹಾಗೂ ಗುಣಮಟ್ಟದ ಶಾಲಾಕಟ್ಟಡ ನುರ್ಮಾಣ ಮಾಡಿರುವುದು ಸಂತಸಕರವಾಗಿದ್ದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ಸರ್ಕಾರದ ವತಿಯಿಂದ ಅನುದಾನ ಕೊಡಿಸಲು ಬದ್ದನಾಗಿದ್ದೇನೆ ಎಂದರು.ಅಣ್ಣೇಶ್ವರ ಗ್ರಾಮ ಪಂಚಾಯತಿಯ ಸುಮಾರು 163 ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿರುವುದು ಮಕ್ಕಳ ಶಿಕ್ಷಣವನ್ನು ಉತ್ತಮಗೊಳಿಸಲು ಸಹಕಾರಿಯಾಗುತ್ತದೆ, ಅಣ್ಣೇಶ್ವರ ಗ್ರಾಮ ಪಂಚಾಯತಿ ಇತರೆ ಗ್ರಾಮ ಪಂಚಾಯತಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.
ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಗನ್ನಾಥ್, ಬಯ್ಯಪ್ಪಾ ಅಧ್ಯಕ್ಷರಾದ ಶಾಂತಕುಮಾರ್, ಸದಸ್ಯರಾದ ಪ್ರಸನ್ನ ಕುಮಾರ್, ಮಂಜುನಾಥ್, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಉಮಾ ಮುನಿರಾಜು, ಕ್ಷೇತ್ರ ಶಿಕ್ಷಣ ಅಧಿಕಾರಿ ಸುಮಾ, ಗ್ರಾಮ ಪಂಚಾಯತಿ ಸದಸ್ಯರು, ಭುವನಹಳ್ಳಿ ಮುನಿರಾಜು, ಅಣ್ಣೇಶ್ವರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಂಗರಾಜು, ಗುತ್ತಿಗೆದಾರರು ರಾಜಣ್ಣ . ಟಿ ಹಾಗೂ ಶಾಲಾ ಸಿಬ್ಬಂದಿ ವರ್ಗ, ಮಕ್ಕಳು ಉಪಸ್ಥಿತರಿದ್ದರು.