ಭಾರತ ಮಹಿಳಾ ಕ್ರಿಕೆಟ್ ತಂಡದ ಯುವ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಚಾ ಘೋಷ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ (18 ಎಸೆತಗಳಲ್ಲಿ) ಬಾರಿಸಿ ದಾಖಲೆ ಬರೆದಿದ್ದಾರೆ.
ಇದರೊಂದಿಗೆ ಭಾರತ ತಂಡವು 217 ರನ್ ಗಳಿಸಿ ಅಂತರರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್ನಲ್ಲಿ ದಾಖಲೆಯ ಸ್ಕೋರ್ ಕೂಡ ಮಾಡಿದೆ.ಭಾರತ ಮಹಿಳಾ ತಂಡದ ಯುವ ವಿಕೆಟ್ಕೀಪರ್-ಬ್ಯಾಟ್ಸ್ಮನ್ ರಿಚಾ ಘೋಷ್ ತಮ್ಮ ಅಬ್ಬರದ ಬ್ಯಾಟಿಂಗ್?ಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.
ತಮ್ಮ ವೃತ್ತಿಜೀವನದಲ್ಲಿ ಈಗಾಗಲೇ ಹಲವು ಸ್ಫೋಟಕ ಇನ್ನಿಂಗ್ಸ್ಗಳನ್ನು ಆಡಿರುವ ರಿಚಾ ಘೋಷ್ ಇದೀಗ ಇತಿಹಾಸ ಸೃಷ್ಟಿಸಿದ್ದಾರೆ. ಮಹಿಳಾ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ರಿಚಾ ಪಾತ್ರರಾಗಿದ್ದಾರೆ.