ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಬದಲಾಗಿದೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಮುಖಂಡರಿಗೆ ಒಂದು ಕಾನೂನು ಮತ್ತು ಕಾಂಗ್ರೆಸ್ಸೇತರ ಪಕ್ಷಗಳ ಮುಖಂಡರಿಗೆ ಮತ್ತೊಂದು ಕಾನೂನು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ವಿರುದ್ಧ ನೀಡುವ ದೂರು ಕೂಡಲೇ ಸ್ವೀಕೃತವಾಗುತ್ತದೆ ಮತ್ತು ಮತ್ತು ಎಫ್ಐಆರ್ ಸಹ ದಾಖಲಾಗುತ್ತದೆ, ಆದರೆ ತಾನು ಪೋಲೀಸ್ ಸ್ಟೇಷನ್ ನಲ್ಲಿ ತನ್ನ ಮೇಲೆ ನಡೆದ ಹತ್ಯೆ ಯತ್ನ ಮತ್ತು ಪೊಲೀಸ್ ದೌರ್ಜನ್ಯದ ಬಗ್ಗೆ ಡಿಸೆಂಬರ್ 19ರಂದು ದೂರು ನೀಡಿದ್ದರೂ, ಸಿಒಡಿ ಅಧಿಕಾರಿ ಮತ್ತು ಡಿಜಿಪಿ-ಐಜಿ ಇಬ್ಬರೂ ತಮ್ಮ ಗಮನಕ್ಕೆ ಬಂದಿಲ್ಲವೆನ್ನುತ್ತಾರೆ ಎಂದರು.