ಬೆಂಗಳೂರು : ರಾಜ್ಯದಲ್ಲಿ ಅನರ್ಹರ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಡವರಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುವುದು, ಅನರ್ಹರ ಕಾರ್ಡ್ ಮಾತ್ರ ರದ್ದು ಪಡಿಸಲಾಗುವುದು. ಬಡವರಿಗೆ ಯೋಜನೆಗಳ ಸದುಪಯೋಗಕ್ಕಾಗಿ ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ರದ್ದು ಪಡಿಸುವುದಿಲ್ಲ.
ನಾವು ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೇವೆ. ಬಿಜೆಪಿಯವರು ಅಥವಾ ಜೆಡಿಎಸ್ನವರು ಇದನ್ನು ತಂದಿದ್ದಾರಾ ಎಂದು ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.2017ರಲ್ಲಿ 1ರೂಪಾಯಿಗೆ 1 ಕೆ.ಜಿ. ಅಕ್ಕಿ ನೀಡಿದ್ದೇವೆ ಎಂದು ಹೇಳಿದ ಮುಖ್ಯಮಂತ್ರಿಯವರು, ನಮ್ಮದು ಬಡವರ ಪರ ಸರ್ಕಾರ ಎಂದಿದ್ದಾರೆ.
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯವರು ಸುಳ್ಳು ಜಾಹೀರಾತು ನೀಡಿದ್ದಾರೆ. ಇದರ ವಿರುದ್ಧ ನಾವು ಕಾನೂನು ಸಮರ ನಡೆಸುತ್ತೇವೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ದೂರು ದಾಖಲಿಸಲು ಚಿಂತನೆ ನಡೆಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.