ಬೆಂಗಳೂರು: ನಟ ಶಿವರಾಜ್ಕುಮಾರ್ ಅವರಿಗೆ ೬೦ ವರ್ಷದ ಮೇಲಾಗಿದೆ. ಈಗಲೂ ಅವರು ಫಿಟ್ ಆಗಿದ್ದಾರೆ. ಅವರು ಆರೋಗ್ಯಕರ ಡಯಟ್ ಫಾಲೋ ಮಾಡುತ್ತಾರೆ. ನಿತ್ಯ ಶೂಟಿಂಗ್ನಲ್ಲಿ ಭಾಗವಹಿಸುತ್ತಾರೆ. ಸದ್ಯ ಅವರು `ಭೈರತಿ ರಣಗಲ್’ ಚಿತ್ರದ ಪ್ರಮೋಷನ್ನಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ತಮಗೆ ಅನಾರೋಗ್ಯ ಆಗಿರೋದು ಹೌದು ಎಂದಿರುವ ಅವರು, ಶಸ್ತçಚಿಕಿತ್ಸೆಗಾಗಿ ಅಮೆರಿಕ ತೆರಳೋದಾಗಿ ಹೇಳಿದ್ದಾರೆ.
ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಶಿವಣ್ಣ ಮಾತನಾಡಿ ದ್ದಾರೆ. ಅಲ್ಲಿ ಅವರು ಅನಾರೋಗ್ಯದ ಬಗ್ಗೆ ಹೇಳಿಕೊಂಡಿದ್ದಾರೆ.
`ನನಗೆ ಅನಾರೋಗ್ಯ ಇದೆ. ನಾನು ಸುಳ್ಳು ಹೇಳಲ್ಲ. ನನೂ ಮನುಷ್ಯನೇ. ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ.
`ಟ್ರೀಟ್ಮೆAಟ್ಗೆ ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ. ಒಂದು ಸರ್ಜರಿ ನಡೆಯಬೇಕಿದೆ. ಅಮೆರಿಕದಲ್ಲಿ ಮಾಡೋದಾ ಅಥವಾ ಇಲ್ಲಿ ಮಾಡೋದಾ ಎನ್ನುವ ಬಗ್ಗೆ ಯೋಚನೆ ನಡೆಯುತ್ತಿದೆ. ಅಮೆರಿಕದಲ್ಲಿ ಮಾಡೋದು ಎಂದಾದರೆ ಒಂದು ತಿಂಗಳು ನಾನು ಅಲ್ಲಿಗೆ ಹೋಗಬೇಕಾಗುತ್ತದೆ. ಜನವರಿಯಿಂದ ನಾನು ಫುಲ್ ಫಾರ್ಮ್ ಶಿವಣ್ಣ ಬರ್ತಾರೆ’ ಎಂದಿದ್ದಾರೆ.
ಶಿವರಾಜ್ಕುಮಾರ್ ಅವರು ತಮ್ಮ ನಿರ್ಮಾಪಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರಂತೆ. ಮುಂದೆ ಯಾವುದೇ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಅವರು ಈ ರೀತಿ ಮಾಡಿದ್ದಾರೆ. `ಉಳಿದ ಸಮಯದಲ್ಲಿ ನಾವು ಅಭಿಮಾನಿಗಳು ಬೇಕು ಎನ್ನುತ್ತೇವೆ. ಈ ರೀತಿ ವಿಚಾರ ಬಂದಾಗ ಏಕೆ ಅವರನ್ನು ದೂರ ಇಡಬೇಕು ಈ ಕಾರಣಕ್ಕೆ ನಾನು ಸುಳ್ಳು ಹೇಳೋದು ಬೇಡ ಎಂದು ಗೀತಾ ಅವರ ಬಳಿ ಹೇಳಿದೆ. ಅಭಿಮಾನಿಗಳು ಫೋಟೋ ತೆಗೆಸಿಕೊಳ್ಳೋಕೆ ಬಂದಾಗ ದೂರ ನಿಲ್ಲಿ ಎನ್ನುತ್ತೇನೆ. ಅವರಿಗೆ ಇನ್ಫೆಕ್ಷನ್ ಆಗಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದೇನೆ ಅಷ್ಟೇ. ಇದೆಲ್ಲ ಇನ್ನೆರಡು ತಿಂಗಳು ಅಷ್ಟೇ’ ಎಂದಿದ್ದಾರೆ.