ಬೆಂಗಳೂರು: ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಅನೈತಿಕ ಸಂಬAಧದ ಹಿನ್ನೆಲೆಯಲ್ಲಿ ಗಂಡ ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಿನ್ನೆ ನಡೆದಿದೆ. ಕೋಕಿಲ(೨೫) ಎಂಬ ಮಹಿಳೆಯನ್ನು ಆಕೆಯ ಗಂಡ ಸಿದ್ದರಾಜು ಕೊಲೆ ಮಾಡಿ ಪರಾರಿ ಆಗಿರುತ್ತಾನೆ. ಮೃತಳು ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು ಈ ಹಿಂದೆಯೂ ಸಹ ಗಲಾಟೆಯಾಗಿ ತುಮಕೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ತಿಳುವಳಿಕೆ ಹೇಳಿ ಕಳುಹಿಸಿದ್ದರು. ಮತ್ತೆ ಗಂಡ ಹೆಂಡತಿ ನಡುವೆ ಗಲಾಟೆಯಾಗಿ ಕತ್ತು ಹಿಸುಕಿ ಸಾಯಿಸಿ ಪರಾರಿಯಾಗಿರುತ್ತಾನೆ ಎಂದು ಮಾದನಾಯಕನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ರ್ ತಿಳಿಸಿದ್ದು, ಆರೋಪಿಯ ಪತ್ತೆಗಾಗಿ ತಂಡ ರಚಿಸಿರುವುದಾಗಿ ಹೇಳಿದ್ದಾರೆ.