ಬೆಂಗಳೂರು: ಕೆರೆ ಕಟ್ಟೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಜಿ ಎಸ್ ಭರತ್ ಮೃತ ಪಟ್ಟಿದ್ದಾರೆ.ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಕೆರೆ ಏರಿ ಮೇಲೆ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿನ ಏರ್ ಬ್ಯಾಗ್ ಓಪನ್ ಆದರೂ ವಿಧಿ ಆಟ ಬೇರೆಯೇ ಇತ್ತು. ಬೆಂಗಳೂರಿನಲ್ಲಿ ವಾಸವಿದ್ದ ಗುಡಿಬಂಡೆ ಪಟ್ಟಣದ ಮೂಲದ ಜಿ ಎಸ್ ಭರತ್ ಗುಡಿಬಂಡೆ ಪಟ್ಟಣದಿಂದ ಬಾಗೇಪಲ್ಲಿ ಗೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ.ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.