ಉಡುಪಿ: ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಟ್ರಕ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.
ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದ್ದು, ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿ ಡಿಕ್ಕಿಹೊಡೆದಿದೆ.
ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರ ಪೈಕಿ ಏಳೂ ಜನ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ ಚಾಲಕನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.