ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದೊಂದಿಗೆ ದೇಶ ಅಪ್ರತಿಮ ಮುತ್ಸದ್ದಿಯನ್ನು ಕಳೆದುಕೊಂಡಂತಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಒಬ್ಬ ಅರ್ಥಶಾಸ್ತ್ರಜ್ಞರಾಗಿ ದೇಶದ ಆರ್ಥಿಕ ವ್ಯವಸ್ಥೆಗೆ ನವಚೈತನ್ಯತುಂಬಿದ ಚೇತನ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕ ಸುಧಾರಣೆ ಹರಿಕಾರ ಅನೇಕ ಸಂದರ್ಭಗಳಲ್ಲಿ ದೇಶದ ಆರ್ಥಿಕ ಸಂಕಷ್ಟಗಳಿಗೆ ಸೂಕ್ತ ಸೂತ್ರ ಎಣೆದ ದಕ್ಷ ಆಡಳಿತಗಾರ. ತಮ್ಮ ದೂರದೃಷ್ಟಿಯಿಂದ ದೇಶಕ್ಕೆ ಆರ್ಥಿಕ ಚೈತನ್ಯ ತುಂಬಿದ ಧೀಮಂತ ನಾಯಕ ಎಂದು ಬಣ್ಣಿಸಿರುವ ಅಗಲಿದ ಚೇತನಕ್ಕೆ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.