ಮಂಡ್ಯ: ನಗರದ ಪಿ.ಡಬ್ಲ್ಯೂ.ಡಿ ಕಚೇರಿ ಆವರಣದಲ್ಲಿ ಗುತ್ತಿಗೆದಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಮಂಡ್ಯ ಜಿಲ್ಲೆ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್.ಚಲುವರಾಯಸ್ವಾಮಿ ರವರ ಅಭಿನಂದನಾ ಸಮಾರಂಭ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡ್ಯ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಯತಿರಾಜು.ಎಂ.ಹೆಚ್ ರವರು ವಹಿಸಿದ್ದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿ. ಡಬ್ಲ್ಯೂ.ಡಿ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಹರ್ಷ.ಹೆಚ್. ಆರ್, ಸಿ.ಏನ್.ಏನ್. ಎಲ್. ವಿ. ಸಿ. ವಿಭಾಗದ ಕಾರ್ಯಪಾಲಕ ಅಭಿಯಂತರರಾದ ನಂಜುಂಡೇಗೌಡ ರವರು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಗುತ್ತಿಗೆದಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕೆ. ಟಿ. ಹನುಮಂತು, ನಿರ್ದೇಶಕರುಗಳಾದ ಮಂಜುನಾಥ್ ಎಸ್. ಜೆ, ನವೀನ್ ಕುಮಾರ್ ಜಿ. ಬಿ ಸೇರಿದಂತೆ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.