ಕನ್ನಡ ಚಿತ್ರರಂಗದ ದಂತಕಥೆ ಕಾಶಿನಾಥ್ ಸುಪುತ್ರ ಅಭಿಮನ್ಯು ಕಾಶಿನಾಥ್ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿರುವ ಅಭಿಮನ್ಯು ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.
ಈ ಚಿತ್ರದ ಮುಹೂರ್ತ ಸಮಾರಂಭ ನಿನ್ನೆ ನೆರವೇರಿದೆ. ಬೆಂಗಳೂರಿನ ಸಹಕಾರ ನಗರದ ಛೇರ್ಮನ್ ಕ್ಲಬ್ ನಲ್ಲಿ ನಡೆದ ಮುಹೂರ್ತಕ್ಕೆ ವಿಶೇಷ ಅತಿಥಿಯಾಗಿ ಕೋಮಲ್ ಕುಮಾರ್ ಆಗಮಿಸಿದ್ದರು. ಅಭಿಮನ್ಯು ಹೊಸ ಚಿತ್ರಕ್ಕೆ ಕೋಮಲ್ ಕ್ಲ್ಯಾಪ್ ಮಾಡಿ ಶುಭ ಹಾರೈಸಿದರು.