ದೇವನಹಳ್ಳಿ: ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಈಗ ಪ್ರತಿಭಾ ಪುರಸ್ಕಾರವನ್ನು ಕಳೆದ ಹಲವು ವರ್ಷಗಳಿಂದ ಮುನ್ನಡೆಸಿಕೊಂಡು ಬರುತ್ತಿದ್ದು. ಜುಲೈ 13 ರಂದು ದೇವನಹಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಿಗದಿ ಆಗಿದ್ದ ಕಾರ್ಯಕ್ರಮ ಜುಲೈ 20ಕ್ಕೆ ನಡೆಯಲಿದೆ ಎಂದು ಅರುಂಧತಿ ಸೇವಾ ಸಂಸ್ಥೆಯ ಅಧ್ಯಕ್ಷ ಜಾಲಿಗೆ ಮುನಿರಾಜು ತಿಳಿಸಿದ್ದಾರೆ.
ನಗರದ ಅರುಂಧತಿ ಸೇವಾ ಸಂಸ್ಥೆಯ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದು ಅತ್ಯುತ್ತಮ ಅಂಕಗಳನ್ನು ಗಳಿಸಿ ವಿದ್ಯಾರ್ಥಿ ವಿದ್ಯಾರ್ಥಿನಿ ಯರನ್ನು ಗುರುತಿಸಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸ ಲಾಗಿತ್ತು. ಈ ಬಾರಿ ಕಾರಣಾಂ ತರ ದಿಂದ ದಿನಾಂಕವನ್ನು ಮುಂದೂಡಲಾಗಿದೆ ಪ್ರತಿಭಾವಂತ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರವನ್ನು ನಡೆಸಲಾಗು ತ್ತಿದೆ ಎಂದರು.
ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿ ಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿ ರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ.
ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭ ವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು.ಮಾಜಿ ಅದ್ಯಕ್ಷ ವೇಣುಗೋಪಾಲ ಮಾತನಾಡಿ, ತಳವರ್ಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶೈಕ್ಷಣಿಕ ಪ್ರಗತಿಯನ್ನು ಮತ್ತಷ್ಟು ಉಜ್ವಲಗೊಳಿಸಲು ಪ್ರತಿಭಾ ಪುರಸ್ಕಾರ ಮಹತ್ತರವಾದ ಕೆಲಸವೆಂದು ಭಾವಿಸ ಲಾಗಿದೆ ಎಂದರು.ಈ ವೇಳೆ ಜಾಲಿಗೆ ಗ್ರಾಮ ಪಂಚಾಯಿತಿ ಅದ್ಯಕ್ಷ ಸಿಂಗ್ರಹಳ್ಳಿ ಆನಂದ್, ಅರುಂಧತಿ ಸೇವಾ ಸಂಸ್ಥೆಯ ಪದಾಧಿಕಾರಿಗಳಾದ ನರಸಿಂಹಮೂರ್ತಿ, ಮಂಜುನಾಥ್, ದಿಲ್ ರಾಜ್, ವೆಂಕಟಪ್ಪ ಡಿಎನ್. ಅನಿಲ್ ಉಪಸ್ಥಿ ತರಿದ್ದರು.