ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಆರೋಪಿಯನ್ನು ವಿವಿಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿರ ಮುಂದೆ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದರೆಹಮಾನ್ (48) ಬಂಧಿತ ಆರೋಪಿಯಾಗಿದ್ದಾನೆ.
ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್ನಲ್ಲಿ ಬಂದ ವ್ಯಕ್ತಿ, ಅಸಭ್ಯವಾಗಿ ವರ್ತಿಸಿದ್ದ. ಆ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್ನಲ್ಲಿ ಚಿತ್ರೀಕರಿಸಿ, ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಮಾಡಿದ್ದರು.ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಗಮನಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ