ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಆಂಧ್ರಪ್ರದೇಶ ಮತ್ತು ಒಡಿಶಾ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಸುಮಾರು 2 ಲಕ್ಷ ಕೋಟಿ ರೂಪಾಯಿಗಳ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಅದೇ ಸಮಯದಲ್ಲಿ, ಪ್ರಧಾನಿ ಮೋದಿ ಗುರುವಾರ ಜನವರಿ 9 ರಂದು ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ 18 ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ವೇಳೆ ಪ್ರಧಾನಿಯವರು ಪ್ರವಾಸಿ ಭಾರತೀಯ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ.
ಹಸಿರು ಇಂಧನ ಮತ್ತು ಸುಸ್ಥಿರ ಭವಿಷ್ಯದತ್ತ ತನ್ನ ಬದ್ಧತೆಯ ಕಡೆಗೆ ಮತ್ತೊಂದು ಪ್ರಮುಖ ಹೆಜ್ಜೆಯಾಗಿ, ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಪುಡಿಮಾಡಕದಲ್ಲಿ ಅತ್ಯಾಧುನಿಕ ಓಖಿPಅ ಗ್ರೀನ್ ಎನರ್ಜಿ ಲಿಮಿಟೆಡ್ನ ಗ್ರೀನ್ ಹೈಡ್ರೋಜನ್ ಹಬ್ ಯೋಜನೆಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಲಿದ್ದಾರೆ.