ಬೆಂಗಳೂರು: ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೃತಪಟ್ಟಿದ್ದು, ಆಟೋ ಚಾಲಕ ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ಕಬ್ಬನ್ ಪಾರ್ಕ್ ಸಮೀಪದ ಕಾಫಿ ಬೋರ್ಡ್ ಸಿಗ್ನಲ್ ಬಳಿ ಸಂಭವಿಸಿದೆ.
ಮೆಜೆಸ್ಟಿಕ್ನತ್ತ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಶಾಲಿನಿ ಎಂಬ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ನಸುಕಿನ ಜಾವ 4 ಗಂಟೆ ಸುಮಾರಿಗೆ ಬೆನ್ಸನ್ ಟೌನ್ನ ಚಿನ್ನಪ್ಪ ಗಾರ್ಡನ್ನಿಂದ ಮೆಜೆಸ್ಟಿಕ್ ಕಡೆಗೆ ಆಟೋ ಸಾಗುತ್ತಿತ್ತು.
ಈ ವೇಳೆ ಕಾಫಿ ಬೋರ್ಡ್ ಬಳಿ ಲಾರಿ ಚಾಲಕ ಸಿಗ್ನಲ್ ಜಂಪ್ ಮಾಡಿ ಮುಂದೆ ಬಂದ ಪರಿಣಾಮ ಆಟೋಗೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಆಟೋದಲ್ಲಿದ್ದ ಶಾಲಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಬಳಿಕ ಲಾರಿಯನ್ನ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.