ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸರು ಆಂಧ್ರಪ್ರದೇಶ ರಾಜ್ಯದ ಗೋದಾವರಿ ಜಿಲ್ಲೆಯ ಆನ್ಲೈನ್ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಆರು ಜನರನ್ನು ಬಂಧಿಸಿ ಆನ್ಲೈನ್ ಬೆಟ್ಟಿಂಗ್ಗೆ ಬಳಸುತ್ತಿದ್ದ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಆರೋಪಿಗಳು ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾಟ್ರ್ಮೆಂಟ್ ಒಂದರಲ್ಲಿ ಬಾಡಿಗೆ ಮನೆ ಪಡೆದು 365 ಹಾಗೂ ಇತರೆ ವೆಬ್ಸೈಟ್ಗಳ ಮೂಲಕ ಆನ್ಲೈನ್ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ತಿಳಿಸಿದರು.
ಇವರುಗಳಿಂದ 45 ಮೊಬೈಲ್ಗಳು ಸೇರಿದಂತೆ ಮೂರು ಲ್ಯಾಪ್ಟಾಪ್ಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.ಇವುಗಳ ಮೌಲ್ಯ 20 ಲಕ್ಷಗಳಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರೂ ತಲೆಮರಿಸಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ.