ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಹೋರಾಟ ತೀವ್ರಗೊಳಿಸಿರುವ ಪಂಚಮಸಾಲಿ ಸಮುದಾಯ ಸೋಮವಾರ ಡಿಸಿ ಕಚೇರಿ ಬಳಿ ಹೋರಾಟಕ್ಕೆ ಮುಂದಾಗಿತ್ತು. ಲಾಠಿಜಾರ್ಜ್ ಖಂಡಿಸಿ ಹೋರಾಟ ನಡೆಸಲು ಬಸವ ಜಯಮೃತ್ಯುಂಜಯ ಶ್ರೀಗಳು ಕರೆ ನೀಡಿದ್ದರು. ಆದರೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಅವಕಾಶ ನೀಡದ್ದಕ್ಕೆ ಪಂಚಮಸಾಲಿ ಸಮುದಾಯ ಆಕ್ರೋಶ ಹೊರಹಾಕಿದೆ.
ಹೋರಾಟಕ್ಕೆ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು, ತಡೆಯುವುದು ಅವರ ಹವ್ಯಾಸ. ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದಿದ್ದಾರೆ. ಸಿಎಂ ಕ್ಷಮೆ ಕೇಳಬೇಕು, ಲಾಠಿಚಾರ್ಜ್ ಮಾಡಿದವರ ಸಸ್ಪೆಂಡ್ ಆಗಬೇಕು ಎಂದು ಆಗ್ರಹಿಸಿದ್ದಾರೆ.