ಬೆಂಗಳೂರು: ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಡುತ್ತಿರುವ ಆರೋಪಗಳಲ್ಲಿ ಸತ್ಯ ಇದ್ದರೆ ನೈತಿಕತೆ ಪ್ರಶ್ನೆ ಬರುತ್ತದೆ. ಸತ್ಯ ಇಲ್ಲದಿದ್ದರೆ ನೈತಿಕತೆ ಪ್ರಶ್ನೆ ಬರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಯವರು ದ್ವೇಷದ ರಾಜಕಾರಣದಿಂದ ಮುಖ್ಯಮಂತ್ರಿಯವರಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.ದ್ವೇಷಕ್ಕಾಗಿ ಇಡಿಯಿಂದ ದೂರು ದಾಖಲಿಸಲಾಗಿದೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಮುಡಾ ಪ್ರಕರಣವನ್ನು ಉಲ್ಲೇಖಿಸಿದ್ದಾರೆ.
ಪ್ರತಿಯೊಂದರಲ್ಲೂ ಬಿಜೆಪಿಯವರಿಂದ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವಾಗುತ್ತಿದೆ. ಕಾನೂನು ಹೋರಾಟವೆಂದರೂ ಟೀಕೆ ಮಾಡುತ್ತಾರೆ. ಸಿಎಂ ಪತ್ನಿ ನಿವೇಶನ ವಾಪಸ್ ಮಾಡಿ ಪತ್ರ ಬರೆದರೂ ಟೀಕೆ ಮಾಡುತ್ತಾರೆ. ಟೀಕೆ ಮಾಡುವುದೇ ಇವರ ಕೆಲಸವಾಗಿದೆ. ಸಿಎಂ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಇದೆ. 136 ಶಾಸಕರಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.