ಟೀಮ್ ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆಯಿದೆ. ಈ ಬಗ್ಗೆ ಆರ್ಆರ್ ಫ್ರಾಂಚೈಸಿ ಹಾಗೂ ದ್ರಾವಿಡ್ ನಡುವೆ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯು ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿಕೊಳ್ಳಲು ಆಸಕ್ತಿ ಹೊಂದಿದೆ. ಈ ಬಗ್ಗೆ ಮಾತುಕತೆಯನ್ನು ಸಹ ನಡೆಸಿದ್ದಾರೆ. ಈ ಮಾತುಕತೆಯು ಅಂತಿಮ ಹಂತದಲ್ಲಿದ್ದು, ದ್ರಾವಿಡ್ ಕಡೆಯಿಂದ ಗ್ರೀನ್ ಸಿಗ್ನಲ್ಗಾಗಿ ಆರ್ಆರ್ ಫ್ರಾಂಚೈಸಿ ಕಾಯುತ್ತಿದೆ. ಹೀಗಾಗಿ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಲಿದ್ದಾರಾ ಎಂಬುದರ ಸ್ಪಷ್ಟ ಮಾಹಿತಿ ಕೆಲವೇ ದಿನಗಳಲ್ಲಿ ಹೊರಬೀಳುವ ಸಾಧ್ಯತೆಯಿದೆ.