ಕನಕಪುರ: ಮಹಿಳೆಯರು ಆರ್ಥಿಕವಾಗಿ ಸದೃಡರಾದಾಗ ಮಾತ್ರ ಮಹಿಳೆಯರ ನಿಜವಾದ ಸಬಲೀಕರಣ ಸಾಧ್ಯ ಎಂದು ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ನಾಗವೇಣಿ ತಿಳಿಸಿದರು.ಹಾರೋಹಳ್ಳಿ ಕೆನರಾಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳು ನಡೆದಂತಹ ಉಚಿತ ಮಹಿಳಾ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಸಮಾರಂಭದ ಮುಖ್ಯ ಅಥಿತಿಯಾಗಿ ಆಗಮಿಸಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಹೊಲಿಗೆ ವೃತ್ತಿಗೆ ಉತ್ತಮವಾದ ಬೇಡಿಕೆಯಿದ್ದು,
ಆದಾಯ ಗಳಿಕೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ,ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಕುಟುಂಬದ ಎಲ್ಲಾ ಕೆಲಸ ಕಾರ್ಯಗಳನ್ನು ನಿಭಾಯಿಸಿಕೊಂಡು ಈ ವೃತ್ತಿಯಲ್ಲಿ ತೊಡಗಿ ಕೊಳ್ಳುವುದರಿಂದ ಹೆಚ್ಚಾಗಿ ಹೊರೆ ಎನಿಸುವು ದಿಲ್ಲ ಎಂದು ತಿಳಿಸಿದರು.ಪ್ರತಿಯೊಬ್ಬ ಮಹಿಳೆಯೂ ತಮ್ಮ ಆಸಕ್ತಿಗನುಗುಣವಾದ ಒಂದೊಂದು ವೃತ್ತಿಯಲ್ಲಿ ತೊಡಗಿರಬೇಕು.ಆಗ ಮಾತ್ರ ಜೀವನದ ಗುಣಮಟ್ಟ ಸುಧಾರಿಸಲು ಸಾಧ್ಯ,ಕೆನರಾ ಬ್ಯಾಂಕ್ ಈ ರೀತಿಯ ಸ್ವಉದ್ಯೋಗಾಧಾರಿತ ತರಬೇತಿ ಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದರು.
ಸಂಸ್ಥೆಯಲ್ಲಿ ಗ್ರಾಮೀಣ ಮಹಿಳೆಯರು ಮಾಡಬಹುದಾದಂತಹ ಎಲ್ಲಾ ತರಬೇತಿಗಳು ಲಭ್ಯವಿದ್ದು, ನಿಮ್ಮ ಸುತ್ತಮುತ್ತಲ ಜನರಿಗೆ ಸಂಸ್ಥೆ ಹಾಗೂ ತರಬೇತಿಯ ಬಗ್ಗೆ ಮಾಹಿತಿ ನೀಡಿ ಕಳುಹಿಸಿಕೊಡುವಂತೆ ತಿಳಿಸಿದರು.ನಂತರದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ವೈದ್ಯೆ ಅರ್ಪಾ ರವರು ಮಹಿಳೆಯರಲ್ಲಿ ಉಂಟಾಗಬಹು ದಾದ ಆರೋಗ್ಯ ಸಮಸ್ಯೆಗಳ ಬಗ್ಗೆ ಹಾಗು ಮುಂಜಾಗ್ರತಾ ಕ್ರಮಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿ ಪಡೆದ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಸಂಸ್ಥೆಯ ನಿರ್ದೇಶಕ ಚಂದ್ರ ಚರಣ್ ಮಾತನಾಡಿ ಗುಣಮಟ್ಟದ ತರಬೇತಿಗೆ ಸಂಸ್ಥೆ ಶ್ರಮಿಸುತ್ತಿದ್ದು, ಸಂಸ್ಥೆಯ ನಿರ್ವಹಣೆಗೆ ಎಲ್ಲರ ಸಹಕಾರ ಅತ್ಯಗತ್ಯ,ಹೊಲಿಗೆ ವೃತ್ತಿ ಮನೆಯಲ್ಲಿಯೇ ಮಾಡಬಹುದಾದರೂ ಅದನ್ನೊಂದು ಉದ್ಯಮವನ್ನಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಉತ್ತಮ ಆದಾಯ ತಂದುಕೊಡಬಲ್ಲ ಉದ್ಯಮ ಇದಾ ಗಿದ್ದು ಸಂಸ್ಥೆಯಿಂದ ತರಬೇತಿ ಪಡೆದುಕೊಂಡು ಹೋದ ನಂತರ ಇತರರಿಗೂ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿ ಅವರಿಗೆ ಆಸಕ್ತಿ ಇರುವಂತಹ ತರಬೇತಿಗಳಿಗೆ ಕಳುಹಿಸಿ ಕೊಡುವಂತೆ ತಿಳಿಸಿ ಮನುಷ್ಯನ ಮೂಲಭೂತ ಅವಶ್ಯಕತೆ ಗಳಲ್ಲಿ ವಸ್ತ್ರವೂ ಒಂದಾಗಿದ್ದು, ಈ ಉದ್ಯಮಕ್ಕೆ ಎಂದಿಗೂ ಬೇಡಿಕೆ ಕಡಿಮೆ ಯಾಗುವುದಿಲ್ಲ ಎಂದು ಹೇಳುತ್ತಾ, ಹೊಲಿಗೆ ತರಬೇತಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರೊಂದಿಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಹಾರೋಹಳ್ಳಿ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕಿ ಜಯಲಕ್ಷ್ಮಿ, ನಂದಿನಿ ತರಬೇತಿ ಸಂಸ್ಥೆಯ ಉಪನ್ಯಾಸಕಿ ನೇತ್ರಾವತಿ ಹಾಗೂ ಶ್ರೀ ದೇವಿಂದ್ರಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.