ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಕಿರಿಯ ಸಹೋದರನ ಮೇಲೆಯೇ ಟ್ರ್ಯಾಕ್ಟರ್ ಚಲಾಯಿಸಿ ಕೊಂದಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಯರಗಟ್ಟಿ ತಾಲೂಕಿನ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದೆ.
ಮಾರುತಿ ಬಾವಿಹಾಳ್ (30) ಎಂಬಾತ 27 ವರ್ಷದ ಗೋಪಾಲ್ ಎಂಬುವವರ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ್ದು, ಆತ ತಕ್ಷಣವೇ ಸಾವಿಗೀಡಾಗಿದ್ದಾರೆ.
ಆಸ್ತಿ ವಿವಾದವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.