ಚೆನ್ನೈ: ಕೆಲ ದಿನದ ಹಿಂದೆ ಹೃದಯ ಸಮಸ್ಯೆಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನೀಕಾಂತ್ ನಿನ್ನೆ ತಡರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದಾರೆ.
ಐದು ದಿನಗಳ ಹಿಂದೆ ಸೆಪ್ಟೆಂಬರ್ 30 ರಂದು ಎದೆ ನೋವು ಕಾಣಿಸಿಕೊಂಡ ಕಾರಣ ರಜನೀಕಾಂತ್ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಹಾಗೂ ವಿಶ್ರಾಂತಿಯ ಬಳಿಕ ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಸುರಕ್ಷಿತವಾಗಿ ಮನೆ ಸೇರಿದ್ದಾರೆ.
ರಜನೀಕಾಂತ್ ಡಿಸ್ಚಾರ್ಜ್ ಆಗಿರುವ ಮಾಹಿತಿಯನ್ನು ಚೆನ್ನೈ ಪೊಲೀಸರು ಖಚಿತ ಪಡಿಸಿದ್ದಾರೆ.