ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಬಲಿಷ್ಠ ಪಡೆಯನ್ನೇ ಪ್ರಕಟಿಸಿದೆ. 15 ಸದಸ್ಯರ ಈ ತಂಡದಲ್ಲಿ ಆರು ಪ್ರಮುಖ ಆಟಗಾರರು ಸ್ಥಾನ ಪಡೆದಿಲ್ಲ ಎಂಬುದು ವಿಶೇಷ. ಅದರಲ್ಲೂ ಇಂಗ್ಲೆಂಡ್ನ ಆಲ್ರೌಂಡರ್ಗಳಾದ ಸ್ಯಾಮ್ ಕರನ್ ಹಾಗೂ ಬೆನ್ ಸ್ಟೋಕ್ಸ್ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಚಾಂಪಿಯನ್ಸ್ ಟ್ರೋಫಿ 2025 ಕ್ಕಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದಾರೆ. ಇನ್ನು ತಂಡದಲ್ಲಿ ಯುವ ಆಟಗಾರನಾಗಿ ಜೇಕಬ್ ಬೆಥೆಲ್ ಕಾಣಿಸಿಕೊಂಡರೆ, ಅನುಭವಿ ದಾಂಡಿಗನಾಗಿ ಜೋ ರೂಟ್ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಆರು ಪ್ರಮುಖ ಆಟಗಾರರಿಗೆ ತಂಡದಲ್ಲಿ ಸ್ಥಾನ ಲಭಿಸಿಲ್ಲ.