ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟಿ೨೦ ಸರಣಿ ಆಡಲಿದೆ. ಉಭಯ ದೇಶಗಳ ನಡುವಣ ಮೊದಲ ಟಿ೨೦ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯಕ್ಕೆ ಡರ್ಬನ್ನ ಕಿಂಗ್ಸ್ಮೀಡ್ ಕ್ರೀಡಾಂಗಣದಲ್ಲಿ ಸಜ್ಜಾಗಿದೆ. ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ ೮:೩೦ ಕ್ಕೆ ಆರಂಭವಾಗಲಿದೆ.
ಚುಟುಕು ಕ್ರಿಕೆಟ್ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಲು ಸೂರ್ಯಕುಮಾರ್ ಯಾದವ್ ಪಡೆ ಪ್ಲಾ÷್ಯನ್ ಮಾಡಿಕೊಂಡಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಹಾಗೂ ಹವಾಮಾನ ಕುರಿತಾದ ವರದಿ ಇಲ್ಲಿದೆ.
ಶ್ರೀಲಂಕಾ ಪ್ರವಾಸದಲ್ಲಿ ಸೂರ್ಯಕುಮಾರ್ ಯಾದವ್ ಮುಂದಾಳತ್ವದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿ ಸರಣಿ ವಶಕ್ಕೆ ಪಡೆದಿತ್ತು. ಬಳಿಕ ಭಾರತದಲ್ಲಿ ನಡೆದಿದ್ದ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಈಗ ಯುವ ಪಡೆ ಮತ್ತೊಂದು ಸವಾಲಿಗೆ ಸಜ್ಜಾಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟ ನಡೆಸಲಿದೆ.
ಹವಾಮಾನ ವರದಿಗಳ ಪ್ರಕಾರ ಡರ್ಬನ್ನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರುವ ಸಂಭವವಿದೆ. ಪಂದ್ಯ ಆರಂಭಕ್ಕೂ ಮುನ್ನ ಕೆಲವೆಡೆ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಈ ವಾತಾವರಣ ಗ್ರೌಂಡ್ ಪಿಚ್ ಮೇಲೂ ಪರಿಣಾಮ ಬೀರಲಿದೆ. ದಿನವೀಡಿ ಇಲ್ಲಿನ ವಾತಾವರಣ ೨೦ ರಿಂದ ೨೪ ಡಿಗ್ರಿ ಸೆಲ್ಸಿಯನ್ ನಡುವೆ ಇರುತ್ತದೆ. ಹೀಗಾಗಿ ಇದು ಸಹ ಆಟಗಾರರಿಗೆ ಸವಾಲು ಒಡ್ಡಲಿದೆ.
ಈ ಪ್ರದೇಶದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ವರದಿ ಮಾಡಿದೆ. ಸಾಮಾನ್ಯವಾಗಿ ಇಲ್ಲಿನ ಗಾಳಿಯ ವೇಗವು ೧೩ ಕಿಲೋ ಮೀಟರ್ ಆಗಿದ್ದು, ಕೆಲವೊಮ್ಮೆ ೪೧ ಕಿಲೋ ಮೀಟರ್ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ. ಈ ವಾತಾವರಣವನ್ನು ನೋಡಿದರೆ, ಶೇಕಡಾ ೪೦ ರಷ್ಟು ಮಳೆಯಾಗುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಅಲ್ಲದೆ ಗುಡುಗು ಮಿಂಚು ಸಹ ಸಾಧ್ಯತೆ ಹೆಚ್ಚಿದ್ದು, ಸಂಜೆಯ ವೇಳೆಗೆ ಮಳೆ ಆಗುಬಹುದು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಳೆ ಅಡ್ಡಿ ಪಡಿಸಿದರೂ ಪಂದ್ಯ ನಡೆಯುವ ಸಾಧ್ಯತೆ ಇದೆ.