ಇಂದು ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಂದು ನಡೆಯುವ ಮಹಿಳಾ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಉಭಯ ತಂಡಗಳು ಮುಖಾಮುಖಿ ಆಗಲಿದೆ.
ಅಕ್ಟೋಬರ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ ಸಿದ್ಧತೆಗೆ ಈ ಪಂದ್ಯಾವಳಿ ಎಲ್ಲ ತಂಡಗಳಿಗೂ ಅತ್ಯಂತ ಪ್ರಮುಖವಾಗಿದೆ.ಒಟ್ಟು 8 ತಂಡಗಳು ಈ ಬಾರಿ ಏಷ್ಯಾಕಪ್?ನಲ್ಲಿ ಕಣಕ್ಕಿಳಿಯುತ್ತಿವೆ. ಏಷ್ಯಾ ಕಪ್ ಟಿ20 ಮಾದರಿಯಲ್ಲಿ ಆಡಿದ 20 ಪಂದ್ಯಗಳಲ್ಲಿ ಭಾರತ 17ರಲ್ಲಿ ಜಯಭೇರಿ ಮೊಳಗಿಸಿದೆ. 2022ರಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಸದ್ಯ ಹಾಲಿ ಚಾಂಪಿಯನ್ ಆಗಿರುವ ಭಾರತ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಕಾಣಿಸಿಕೊಂಡಿದೆ.
ಪುರುಷರ ಕ್ರಿಕೆಟ್ನಂತೆಯೇ ಮಹಿಳಾ ಕ್ರಿಕೆಟ್ನಲ್ಲಿಯೂ ಭಾರತ ತಂಡ ಪಾಕಿಸ್ತಾನ ವಿರುದ್ಧ ಉತ್ತಮ ದಾಖಲೆ ಹೊಂದಿದೆ. ಇದುವರೆಗೆ 14 ಟಿ20 ಪಂದ್ಯಗಳಲ್ಲಿ 11ರಲ್ಲಿ ಗೆಲುವು ಸಾಧಿಸಿದೆ. ಏಷ್ಯಾ ಕಪ್ನಲ್ಲಿ ಒಟ್ಟು 6 ಸಲ ಮುಖಾಮುಖೀಯಾಗಿದ್ದು, ಭಾರತ ಐದನ್ನು ಗೆದ್ದಿದೆ. ಭಾರತ ಇತ್ತೀಚೆಗೆ ತವರಿನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಹೀಗಾಗಿ ಇದೇ ಪ್ರದರ್ಶನ ಏಷ್ಯಾಕಪ್ನಲ್ಲಿಯೂ ಮೂಡಿಬರಬಹುದೆಂದು ನಿರೀಕ್ಷೆ ಮಾಡಲಾಗಿದೆ