ಬೆಂಗಳೂರು: ಇಂದು ರಾತ್ರಿಯೇ ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ.ರಾತ್ರಿ ಎಂಟು ಗಂಟೆಗೆ ಹೆಚ್ಎಎಲ್ನಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿಯವರು ರಾತ್ರಿ ದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ನಾಳೆ ಕೆಎಂಎಫ್ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಿರುವನಂದಿನಿ ಹಾಲಿನ ಉತ್ಪನ್ನಗಳನ್ನ ಮಾರುಕಟ್ಟೆಗೆ ಬಿಡುಗಡೆ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ನಂತರ ಎಐಸಿಸಿ ನಾಯಕರನ್ನೂ ಭೇಟಿ ಮಾಡಲಿದ್ದಾರೆ.ನಾಯಕರ ಭೇಟಿ ಸಮಯದಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ.