ಬೆಂಗಳೂರು: ಮುಡಾ ಹಗರಣದಲ್ಲಿ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವ ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣದ ವಿಚಾರಣೆ ನಡೆಯಲಿದೆ.
ರಾಜ್ಯಪಾಲರು ನೀಡಿರುವ ತನಿಖೆಗೆ ಅನುಮತಿಯನ್ನು ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿಯವರು ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿ ಈಗಾಗಲೇ ಎರಡು ಮೂರುಬಾರಿ ವಿಚಾರಣೆ ನಡೆದು ಇಂದಿಗೆ ಮುಂದೂಡಲಾಗಿತ್ತು. ಇಂದು ಮುಖ್ಯಮಂತ್ರಿಯವರ ಪರ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ವಿಚಾರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಬಿಜೆಪಿಯ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಕಾಯ್ದೆ ಪ್ರಕರಣದ ವಿಚಾರಣೆಯೂ ಇಂದೇ ನಡೆಯಲಿದೆ.ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೇ ಹಲವು ಭಾರಿ ವಿಚಾರಣೆ ನಡೆದು ಇಂದಿಗೆ ಮುಂದೂಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪ್ರಕರಣದ ಅರ್ಜಿಗಳ ವಿಚಾರಣೆ ಇಂದು ಮಧ್ಯಾಹ್ನ 2.30ಕ್ಕೆ ನಡೆಯಲಿದೆ.